ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021
ಬೈಕು, ಟಿವಿ, ಐದು ಎಕರೆ ಜಮೀನು ಇದ್ದರೆ ಬಿಪಿಎಲ್ ಕಾರ್ಡು ರದ್ದು ಮಾಡುವುದಾಗಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಇದನ್ನೂ ಓದಿ | SHIMOGA | 116 ಕೋಟಿಯ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಸಿಕ್ತು ಚಾಲನೆ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಉಮೇಶ್ ಕತ್ತಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿವುದಿಲ್ಲ. ಅವರೇನು ಹೇಳಿದ್ದಾರೋ ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.
ಉಮೇಶ್ ಕತ್ತಿ ಅವರ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆಗಳು ನಡೆಯುತ್ತಿವೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]