ಶಿವಮೊಗ್ಗ ಲೈವ್.ಕಾಂ | 17 ಏಪ್ರಿಲ್ 2019
ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ, ಪ್ರಚಾರಕ್ಕೆ ತೆರೆ ಬಿದ್ದ ಬೆನ್ನಿಗೆ, ಎರಡನೇ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರ ಬಿರುಸುಗೊಂಡಿದೆ. ಎರಡನೇ ಹಂತದಲ್ಲಿ ತೀವ್ರ ಜಿದ್ದಾಜಿದ್ದಿಯ ಕ್ಷೇತ್ರಗಳಲ್ಲಿ ಒಂದಾಗಿರುವ ಶಿವಮೊಗ್ಗದಲ್ಲಿ ಇವತ್ತು ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಯಾರು ಎಲ್ಲೆಲ್ಲಿ ಕ್ಯಾಂಪೇನ್ ಮಾಡ್ತಾರೆ?
ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಜಿಲ್ಲೆಯ ಮೂರು ಕಡೆ ಸಮಾವೇಶ ನಡೆಸಿ, ಪ್ರಚಾರ ಮಾಡಲಿದ್ದಾರೆ. ಸಿಎಂ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಆನವಟ್ಟಿ, ಮಧ್ಯಾಹ್ನ 12.50ಕ್ಕೆ ಆನವೇರಿ ಮತ್ತು ಮಧ್ಯಾಹ್ನ 2.35ಕ್ಕೆ ಶಿಕಾರಿಪುರದಲ್ಲಿ ಸಮಾವೇಶ ನಡೆಸಲಿದ್ದಾರೆ.

ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಪರವಾಗಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಶಿಕಾರಿಪುರ ಮತ್ತು ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ.

ಬೆಳಗ್ಗೆ 11ಕ್ಕೆ ಶಿಕಾರಿಪುರ, ಮಧ್ಯಾಹ್ನ 3ಕ್ಕೆ ಶಿರಾಳಕೊಪ್ಪ, ಸಂಜೆ 5 ಗಂಟೆಗೆ ಆನವಟ್ಟಿ, 7 ಗಂಟೆಗೆ ಸೊರಬದಲ್ಲಿ ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕರಾದ ಕೆ.ಎಸ್.ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ್, ನಟಿ ಶೃತಿ ಸೇರಿದಂತೆ ಪ್ರಮುಖರು ಯಡಿಯೂರಪ್ಪ ಅವರೊಂದಿಗೆ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]