ಶಿವಮೊಗ್ಗ ಲೈವ್.ಕಾಂ | SHIMOGA | 30 ಸೆಪ್ಟೆಂಬರ್ 2019
https://www.facebook.com/ckdcinternational/videos/2433592173582988/?t=1
ಸಾಲು ಸಾಲು ಕಾರ್ಯಕ್ರಮಗಳ ನಡುವೆಯು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಲ್ಯಾಕ್ಸ್ ಮೂಡಿಗೆ ಜಾರಿದರು. ರಾಜಕಾರಣಿಗಳು, ಅಧಿಕಾರಿಗಳು, ಬಿಜೆಪಿ ಕಾರ್ಯಕರ್ತರ ಜೊತೆಗೆ ಹೊಟೇಲ್’ಗೆ ತೆರಳಿ, ತಿಂಡಿ ಸೇವಿಸಿದರು.

ಬೆಳಗ್ಗೆಯಿಂದ ನಿರಂತರ ಜನತಾದರ್ಶನ, ಸಭೆ, ಸಮಾರಂಭಗಳಲ್ಲಿ ಪಾಲ್ಗೊಂಡಿದ್ದ ಸಿಎಂ ಯಡಿಯೂರಪ್ಪ, ಸಂಜೆ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಬಿ.ಹೆಚ್.ರಸ್ತೆಯಲ್ಲಿರುವ ಮೀನಾಕ್ಷಿ ಭವನ ಹೊಟೇಲ್’ಗೆ ತೆರಳಿದರು. ಇಷ್ಟದ ತನಿಸುಗಳನ್ನು ಆರ್ಡರ್ ಮಾಡಿ, ಎಲ್ಲರೊಂದಿಗೆ ಕೆಲ ಕ್ಷಣ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್, ಜಿಲ್ಲಾಧಿಕಾರಿ ಶಿವಕುಮಾರ್, ಸಿಇಒ ವೈಶಾಲಿ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]