SHIVAMOGGA LIVE NEWS | 8 FEBRURARY 2023
SHIMOGA : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ. ಕಾರ್ಖಾನೆ ಪುನಾರಂಭ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ತಿಳಿಸಿದರು.
ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ (Helipad) ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ ನಿಯೋಗದೊಂದಿಗೆ ಭೇಟಿಯಾಗುತ್ತೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಪ್ರಮುಖರ ಸಭೆ
ವಿಐಎಸ್ಎಲ್ ಕಾರ್ಖಾನೆ (VISL) ಪುನಾರಂಭ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ. ಜಿಲ್ಲೆಯ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ವಿವಿಧ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯ ಪ್ರಮುಖರು, ಆಸಕ್ತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿ ಕಾರ್ಖಾನೆ ಪುನಶ್ಚೇತನ ಕುರಿತು ನಿರ್ಣಯ ಕೈಗೊಳ್ಳಲಾಗುತ್ತದೆ. ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತೆ. ಅದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ರಾಜಕೀಯ ಬೆರೆಸುವುದು ಬೇಡ
ವಿಐಎಸ್ಎಲ್ ಕಾರ್ಖಾನೆ ಕಾರ್ಮಿಕರ ಪ್ರತಿಭಟನೆ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಕಾರ್ಖಾನೆ ಪುನಾರಂಭವಾದರೆ ಈ ಭಾಗದ ಆರ್ಥಿಕ ಬೆಳವಣಿಗೆಯಾಗಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭವಾಗಬೇಕು, ಲಾಭದಲ್ಲಿ ನಡೆಯಬೇಕು ಎಂಬುದು ತಮ್ಮ ಉದ್ದೇಶ ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ – ಭದ್ರಾವತಿಯಲ್ಲಿ ಡಿಕೆಶಿ, VISL ಕುರಿತು ಯಡಿಯೂರಪ್ಪ, ಸಂಸದ ರಾಘವೇಂದ್ರಗೆ ಪ್ರಶ್ನೆ, ಏನೆಲ್ಲ ಪ್ರಸ್ತಾಪಿಸಿದರು?