ಶಿವಮೊಗ್ಗ ಲೈವ್.ಕಾಂ | SHIMOGA | 26 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಡಿಸೆಂಬರ್ 27ರ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ವಾಸ್ತವ್ಯ ಹೂಡಲಿದ್ದಾರೆ. ಸಾಗರದ ಸಿಗಂದೂರು ಬಳಿಯ ಚದರವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಂತರ ಅಲ್ಲಿಂದ ಹೊನ್ನಾವರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿ.29ಕ್ಕೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗಕ್ಕ ಸಿಎಂ ಭೇಟಿ
ಡಿ.28ರಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಥಹಳ್ಳಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಶ್ರೀ ರಾಮೇಶ್ವರ ದೇವಸ್ಥಾನದ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಸಿಎಂ, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಡಿ.29ರಂದು ತೀರ್ಥಹಳ್ಳಿಯ ವಿವಿಧ ಕಾಮಗಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಂಕುಸ್ಥಾಪನೆ ಮಾಡಲಿದ್ದಾರೆ. ಅಲ್ಲಿಂದ ಕುಪ್ಪಳ್ಳಿಯ ಕವಿ ಮನೆಗೆ ಸಿಎಂ ಭೇಟಿ ನೀಡಲಿದ್ದಾರೆ. ಕುವೆಂಪು ಅವರ 115ನೇ ಜನ್ಮ ದಿನೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಅದೇ ದಿನ ಮಧ್ಯಾಹ್ನ ಮಾಳೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಭದ್ರಾವತಿಯಲ್ಲಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]