ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರವರಿ 28ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 28ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಸೊರಬದ ಆನವಟ್ಟಿಗೆ ಆಗಮಿಸಲಿದ್ದಾರೆ.
ಆನವಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮೂಗುರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಶಿಕಾರಿಪುರಕ್ಕೆ ಭೇಟಿ ನೀಡಲಿರುವ ಯಡಿಯೂರಪ್ಪ ಅವರು ಸಂಜೆ 4 ಗಂಟೆಗೆ ಟಿಎಪಿಸಿಎಂಎಸ್ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4.50ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ಗೆ ಸಿಎಂ ಆಗಮಿಸಲಿದ್ದಾರೆ. ಇಲ್ಲಿನ ಮೆಡಿಕಲ್ ಕಾಲೇಜು ಅಸೋಸಿಯೇಷನ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಗೆಜ್ಜೇನಹಳ್ಳಿಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯದ ಭಾಗಶಃ ಅನುಷ್ಠಾನ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಮ್ಮೊಲುಮೆ ಅಭಿಮಾನದ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಾರ್ಚ್ 1ರಂದು ಬೆಳಗ್ಗೆ 9 ಗಂಟೆಗೆ ಎನ್ಡಿವಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]