ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ನೇಮಕವಾಗುತ್ತಿದ್ದಂತೆ ಶಿವಮೊಗ್ಗದಲ್ಲಿ ಕಾಂಗ್ರೆಸಿಗರು ಸಂಭ್ರಮಾಚರಣೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಯಿತು.
https://www.facebook.com/liveshivamogga/videos/1081423142226922/?t=2
ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರ ಹಿಡಿದು, ಘೋಷಣೆಗಳನ್ನು ಕೂಗಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನೆರವೇರಿಸಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪ್ರಮುಖರಾದ ದೇವೇಂದ್ರಪ್ಪ, ವಿಜಯ್ ಕುಮಾರ್, ಮಧುಸೂದನ್, ಪ್ರವೀಣ್ ಕುಮಾರ್, ಚೇತನ್, ಬಾಲಾಜಿ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]