ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020

ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನದ ಕುರಿತು ಅವಹೇಳನ ಮಾಡಿದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯಿತು. ಶಿವಮೊಗ್ಗ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾವೀರ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂಸದ ಸ್ಥಾನದಿಂದ ಅನಂತಕುಮಾರ್ ಹೆಗಡೆ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಮಹಾತ್ಮ ಗಾಂಧೀಜಿ ಮತ್ತು ಅವರ ಸತ್ಯಾಗ್ರಹವನ್ನು ಸಂಸದ ಅನಂತ ಕುಮಾರ್ ಹೆಗಡೆ ಅವರು ಅವಹೇಳನ ಮಾಡಿದ್ದಾರೆ. ಇದಕ್ಕೂ ಮೊದಲು ಸಂವಿಧಾನಕ್ಕೆ ಅಗೌರವ ತೋರಿಸಿದ್ದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ಉತ್ತರ ಬ್ಲಾಕ್ ಸಮಿತಿ ಅಧ್ಯಕ್ಷ ನಾಗರಾಜ್, ದಕ್ಷಿಣ ಬ್ಲಾಕ್ ಸಮಿತಿ ಅಧ್ಯಕ್ಷ ವಿಶ್ವನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]