ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 DECEMBER 2022
ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (cops raid) ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (cops raid) ನಡೆಸಿದ್ದಾರೆ. ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದ ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ
ಮಾರಾಟ ಮಾಡುವ ಉದ್ದೇಶದಿಂದಲೆ ಇವರು ಗಾಂಜಾ ಹೊಂದಿದ್ದರು ಎಂದು ಹೇಳಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಂದು ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.