ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020
ಶಿವಮೊಗ್ಗದ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆಯಿಲ್ಲದಿರುವುದರಿಂದ ಕರೋನಾ ಸೋಂಕಿತರು ಸಾಯುವಂತಾಗಿದೆ ಎಂದು ಆರೋಪಿಸಿ ಸಿಟಿಜನ್ಸ್ ಯುನೈಟೆಡ್ ಮೂಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ ಸಿಟಿಜನ್ಸ್ ಯುನೈಟೆಡ್ ಮೂಮೆಂಟ್ ಕಾರ್ಯಕರ್ತರು, ಶಿವಮೊಗ್ಗದಲ್ಲಿ ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇರುವ ಏಕೈಕ ಆಸ್ಪತ್ರೆ ಮೆಗ್ಗಾನ್. ಆದರೆ ಇಲ್ಲಿ ಅವ್ಯವಸ್ಥೆ ಇರುವುದರಿಂದಾಗಿ ಜನ ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಇಲ್ಲಿನ ಅವ್ಯವಸ್ಥೆಯಿಂದಾಗಿಯೇ ಪ್ರತಿದಿನ ರೋಗಿಗಳು ಸಾಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿನ್ನೆ ನಮ್ಮ ಸಂಬಂಧಿಕರೊಬ್ಬರು ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆ ಇದ್ದರೂ ಅವರಿಗೆ ಆಕ್ಸಿಜನ್ ನೀಡದಿರುವುದರಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಸೈಯದ್ ವಹಾಬ್ ಅಡ್ಡು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]