ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಒಂಭತ್ತಕ್ಕೆ ಏರಿಕೆ ಆಗಿದೆ.
ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕರೋನ ಪಾಸಿಟಿವ್ ಬಂದಿದೆ.
‘ನಿನ್ನೆ ಒಂದು ಪಾಸಿಟಿವ್ ಪ್ರಕರಣ ಬಂದಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಯ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಆ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಸೆಕೆಂಡರಿ ಕಾಂಟ್ಯಾಕ್ಟ್ ಪತ್ತೆ ಹಚ್ಚಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.