ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 6 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಇವತ್ತು 20ಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲೆಯಲ್ಲಿ ಇವತ್ತು 23 ಮಂದಿಗೆ ಕರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಸೋಂಕಿತರ ಪೈಕಿ 15 ಮಂದಿ ಶಿವಮೊಗ್ಗ ತಾಲೂಕಿನವರಾಗಿದ್ದಾರೆ. ನಾಲ್ಕು ಮಂದಿ ತೀರ್ಥಹಳ್ಳಿ, ಇಬ್ಬರು ಸಾಗರ, ಇಬ್ಬರು ಸೊರಬದವರಾಗಿದ್ದಾರೆ.
ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿದ ಕೇಸ್
ಶೈಕ್ಷಣಿಕ ಸಂಸ್ಥೆಗಳಲ್ಲಿ ಕರೋನಾದ ರಾಂಡಮ್ ಪರೀಕ್ಷೆ ನಡೆಸಲಾಗುತ್ತಿದೆ. ಇವತ್ತು ಪರೀಕ್ಷೆ ನಡೆಸಿದಾಗ ಶಿಕ್ಷಣ ಸಂಸ್ಥೆಗಳಲ್ಲಿ ಹನ್ನೊಂದು ಮಂದಿಗೆ ಕೋವಿಡ್ ಸೋಂಕು ತಗುಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಕ್ರಿಯೆ ಪ್ರಕರಣದಲ್ಲಿ ಏರಿಕೆ
23 ಮಂದಿಗೆ ಇವತ್ತು ಕರೋನ ಸೋಂಕು ತಗುಲಿರುವುದರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಕ್ಯೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸದ್ಯ 67 ಸೋಂಕಿತರಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಪೈಕಿ 9 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 52 ಮಂದಿ ಹೋಮ್ ಐಸೊಲೇಷನ್’ನಲ್ಲಿದ್ದಾರೆ.
ಇನ್ನು, ಜಿಲ್ಲೆಯಲ್ಲಿ ಕರೋನ ಟೆಸ್ಟಿಂಗ್ ಸಂಖ್ಯೆ ಏರಿಕೆಯಾಗಿದೆ. ಇವತ್ತು 3008 ಮಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹ ಮಾಡಲಾಗಿದೆ.