ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಶಿವಮೊಗ್ಗದಲ್ಲಿ ಇವತ್ತು ಕರೋನ ಅಬ್ಬರಿಸಿದೆ. ಜಿಲ್ಲೆಯಲ್ಲಿ 178 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ನಡುವೆ 180 ಸೋಂಕಿನಿಂದ ಗುಣವಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ 3121 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ 2246 ಸ್ಯಾಂಪಲ್ಗಳು ನೆಗೆಟಿವ್ ಬಂದಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್?
ಶಿವಮೊಗ್ಗ ತಾಲೂಕಿನಲ್ಲಿ 79, ಭದ್ರಾವತಿಯಲ್ಲಿ 58, ಶಿಕಾರಿಪುರದಲ್ಲಿ 3, ತೀರ್ಥಹಳ್ಳಿಯಲ್ಲಿ 14, ಸೊರಬದಲ್ಲಿ 2, ಹೊಸನಗರದಲ್ಲಿ 14, ಸಾಗರದಲ್ಲಿ 3, ಇತರೆ ಜಿಲ್ಲೆಯ 5 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. ಇದರಿಂದ ಕರೋನದಿಂದ ಮೃತರಾದವರ ಒಟ್ಟು ಸಂಖ್ಯೆ 359ಕ್ಕೆ ಹೆಚ್ಚಳವಾಗಿದೆ.
ಜಿಲ್ಲೆಯಲ್ಲಿ ಸದ್ಯ ಸೋಂಕಿತರ ಸಂಖ್ಯೆ 1305ಕ್ಕೆ ಏರಿಕೆಯಾಗಿದೆ. ಈ ಪೈಕಿ 215 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 142 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 907 ಸೋಂಕಿತರು ಹೋಂ ಐಸೊಲೇಷನ್ನಲ್ಲಿದ್ದಾರೆ. 41 ಸೋಂಕಿತರು ಟ್ರೈಯೇಜ್ನಲ್ಲಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]