ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಡಿಸೆಂಬರ್ 2021
ಶಿವಮೊಗ್ಗದಲ್ಲಿ ಮತ್ತೆ ಕರೋನ ಭೀತಿ ಎದುರಾಗಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾಗರ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಲಾಗಿದೆ.
ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆಸ್ಪತ್ರೆಯ ಒಪಿಡಿಯನ್ನು ಬಂದ್ ಮಾಡಲಾಗಿದೆ. ಇನ್ನು, ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.