SHIVAMOGGA LIVE NEWS | 26 DECEMBER 2023
SHIMOGA : ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಶಿವಮೊಗ್ಗ ಮತ್ತು ಸೊರಬ ತಾಲೂಕಿನ ತಲಾ ಒಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಒಟ್ಟು ಸೋಂಕಿತರ ಪೈಕಿ ಇಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಮಂದಿ ಹೋಂ ಐಸೊಲೇಷನ್ಗೆ ಒಳಗಾಗಿದ್ದಾರೆ. ಇನ್ನು, ಇವತ್ತು 236 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಗೆ ದಿಢೀರ್ ಮುತ್ತಿಗೆ, ಕಾರಿಗೆ ಅಡ್ಡಲಾಗಿ ಕುಳಿತು ಆಕ್ರೋಶ, ಕಾರಣವೇನು?