ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಒಂದೇ ದಿನ ನೂರಕ್ಕಿಂತಲೂ ಹೆಚ್ಚು ಮಂದಿ ಸೋಂಕು ತುಗಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 116 ಮಂದಿ ಸೋಂಕು ತಗುಲಿದೆ. ಇದು ಜಿಲ್ಲೆಯಲ್ಲಿ ಜನರಲ್ಲಿ ಆತಂಕ ಮೂಡಿಸಿದೆ.
ಶಿವಮೊಗ್ಗ ತಾಲೂಕಿನಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಶಿವಮೊಗ್ಗದಲ್ಲಿ 89 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 12, ಶಿಕಾರಿಪುರದಲ್ಲಿ 6, ಹೊಸನಗರದಲ್ಲಿ 3, ತೀರ್ಥಹಳ್ಳಿಯಲ್ಲಿ ಒಬ್ಬರು, ಸಾಗರದಲ್ಲಿ ಒಬ್ಬರು, ಸೊರಬದಲ್ಲಿ ಒಬ್ಬರು, ಇತರೆ ಜಿಲ್ಲೆಯಿಂದ ಬಂದ ಮೂವರಿಗೆ ಸೋಂಕು ತಗುಲಿದೆ.
ಮುನ್ನೂರರ ಸನಿಹಕ್ಕೆ ಸಕ್ರಿಯ ಪ್ರಕರಣ
ಇವತ್ತು 116 ಮಂದಿಗೆ ಸೋಂಕು ತಗುಲಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಮುನ್ನೂರರ ಸನಿಹಕ್ಕೆ ತಲುಪಿದೆ. ಜಿಲ್ಲೆಯಲ್ಲಿ 294 ಸೋಂಕಿತರಿದ್ದಾರೆ. ಈ ಪೈಕಿ 33 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 21 ಮಂದಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. 153 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ. ಟ್ರಯೇಜ್’ನಲ್ಲಿ 10 ಮಂದಿ ಇದ್ದಾರೆ.
ಜಿಲ್ಲೆಯಲ್ಲಿ ಇವತ್ತು 8 ಮಂದಿ ಕರೋನದಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
[…] […]