ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಂಬಂಧಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕುಟುಂಬ ಇವತ್ತು ಕರೋನ ಪರೀಕ್ಷೆಗೆ ಒಳಗಾಗಿದೆ. ಎಲ್ಲರಿಗೂ ನೆಗೆಟಿವ್ ರಿಪೋರ್ಟ್ ಬಂದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
21 ಮಂದಿಯ ಪರೀಕ್ಷೆ
ಸಚಿವ ಕೆ.ಎಸ್.ಈಶ್ವರಪ್ಪ, ಅವರ ಕುಟುಂಬದ ಸದಸ್ಯರು, ಅಡುಗೆಯವರು, ಕಾರು ಚಾಲಕರು ಸೇರಿ 21 ಮಂದಿ ಕೋವಿಡ್ ಟೆಸ್ಟ್ಗೆ ಒಳಗಾಗಿದ್ದರು. ಇವರೆಲ್ಲರ ವರದಿಯು ನೆಗೆಟಿವ್ ಎಂದು ಬಂದಿದೆ ಎಂದು ಸಚಿವ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಭೆ, ಸಮಾರಂಭ, ಕಾರ್ಯಕ್ರಮ ರದ್ದು
ಸಂಬಂಧಿಯೊಬ್ಬರಿಗೆ ಪಾಸಿಟಿವ್ ಬಂದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎಲ್ಲಾ ಕಾರ್ಯಕ್ರಮಗಳು, ಸಭೆಗಳನ್ನು ರದ್ದಗೊಳಿಸಿದರು. ಕೋವಿಡ್ ಪರೀಕ್ಷೆಗೆ ಒಳಗಾಗಿ ಇಡೀ ದಿನ ಕುಟುಂಬದವರ ಜೊತೆಗೆ ಮನೆಯಲ್ಲೇ ಉಳಿದಿದ್ದರು.
ಇಷ್ಟು ಬೇಗೆ ರಿಪೋರ್ಟ್ ಹೇಗೆ ಕೊಟ್ಟರು?
ಮತ್ತೊಂದೆಡೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕುಟುಂಬಕ್ಕೆ ಇಷ್ಟು ಬೇಗ ಕೋವಿಡ್ ರಿಪೋರ್ಟ್ ನೀಡಿದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವರು ಕೋವಿಡ್ ಟೆಸ್ಟ್ ಮಾಡಿಸಿದರೆ, ಅದರ ಮಾಹಿತಿ ತಿಳಿಯಲು ಮೂರ್ನಾಲ್ಕು ದಿನವಾಗುತ್ತದೆ. ಕೆಲವರಿಗಂತೂ ಮಾಹಿತಿಯೇ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸಚಿವರ ಕುಟುಂಬಕ್ಕೆ ಇಷ್ಟು ಬೇಗ ರಿಪೊರ್ಟ್ ಸಿಕ್ಕಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಸಚಿವರ ಟ್ವೀಟ್ನ ಕೆಳಗೆ ಈ ಕಮೆಂಟುಗಳು ಬಂದಿವೆ.
ನಾಳೆಯಿಂದ ಎಂದಿನಂತೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]