ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ಈಗಾಗಲೇ ಆನ್ಲೈನ್ ಮೂಲಕ ದಾಖಲಾತಿ ಮಾಡಿಕೊಂಡ 18 ರಿಂದ 45ವರ್ಷದ ಫಲಾನುಭವಿಗಳಿಗೆ ಮೇ 10ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಗೂ ಮೇ 11ರಂದು ಇತರೆ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದ್ದಾರೆ.
ಈಗಾಗಲೇ ಹೆಸರು ನೋಂದಾಯಿಸಿಕೊಂಡವರ ಮೊಬೈಲ್ಗೆ ಲಸಿಕಾ ಕೇಂದ್ರ ಹಾಗೂ ಲಸಿಕೆ ನೀಡುವ ಸಮಯವನ್ನು ಕಳುಹಿಸಲಾಗುವುದು. ಅಂತವರು ಮಾತ್ರ ಲಸಿಕಾ ಕೇಂದ್ರಕ್ಕೆ ಬರಬೇಕು. ಮೇ 10ರಂದು ಮೆಗ್ಗಾನ್ನಲ್ಲಿರುವ ಎರಡು ಲಸಿಕಾ ಕೇಂದ್ರಗಳಲ್ಲಿ ತಲಾ 150 ಮಂದಿಗೆ ಮಧ್ಯಾಹ್ನ 2 ಗಂಟೆ ಬಳಿಕ ಲಸಿಕೆ ನೀಡಲಾಗುವುದು. ಮೇ 11ರಂದು ಬೆಳಿಗ್ಗೆ 10ಗಂಟೆಯಿಂದ ಲಸಿಕೆ ನೀಡಲಾಗುವುದು.
ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮೇ 11ರಂದು ಬೆಳಿಗ್ಗೆ 10ಗಂಟೆಯಿಂದ ತಲಾ 150 ಮಂದಿಗೆ ಲಸಿಕೆ ನೀಡಲಾಗುವುದು. ಎಲ್ಲಾ ಫಲಾನುಭವಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆಯಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರದಲ್ಲಿ ಕರೋನಾಘತ, ಸಾವಿನ ಸಂಖ್ಯೆಯಲ್ಲೂ ಏರಿಕೆ
ಈ ಹಿಂದೆ ಮೆಗ್ಗಾನ್ ಆಸ್ಪತ್ರೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ನೀಡುವ ಕೇಂದ್ರವನ್ನು ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಲಾಕ್ಡೌನ್, ಪೊಲೀಸರಿಗೆ ಪೂರ್ಣ ಜವಾಬ್ದಾರಿ, ರೂಪುರೇಷೆ ರೆಡಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]