ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020
ಲಾಕ್‌ಡೌನ್ ವೇಳೆ ಅನ್ಯ ರಾಜ್ಯದ ಮದ್ಯವನ್ನು ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರಕರಣಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಪ್ರಕರಣಗಳಲ್ಲಿ ನಾಲ್ಕು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಒಂದು ಪ್ರಕರಣದಲ್ಲಿ ಭದ್ರಾವತಿಯ ಇಬ್ಬರು ಯುವಕರನ್ನು ಅರೆಸ್ಟ್ ಮಾಡಲಾಗಿದೆ. ಇವರಿಂದ ಒಂದು ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಿ, ಒಂದು ಬೈಕವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಬಂಧಿತರಿಂದ ಹತ್ತು ಬಾಟಲಿ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯದ 15 ಸಾವಿರ ರೂ. ಎಂದು ಅಬಕಾರಿ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]