24 ವರ್ಷದ ಯುವಕನಿಗೆ 10 ವರ್ಷ ಜೈಲು, ₹6,84,000 ದಂಡ, ಕಾರಣವೇನು?

ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 24 ವರ್ಷದ ಯುವಕನಿಗೆ 10 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ₹6,84,000 ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ. (ಈ ಸುದ್ದಿಯನ್ನು ಇನ್ನು 43 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಯುವಕನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಪೂರೈಸಿದ್ದ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವತ್‌ ಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

Shivamogga-Court-Building

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು, ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ನ್ಯಾಯಾಲಯ ಆರೋಪಿಗೆ ವಿಧಿಸಿರುವ ₹6,84,000 ದಂಡದ ಮೊತ್ತದಲ್ಲಿ ₹6,00,000 ಹಣವನ್ನು ಸಂತ್ರಸ್ತ ಬಾಲಕಿಗೆ ನೀಡಲು ಆದೇಶಿಸಲಾಗಿದೆ. ಸರ್ಕಾರದ ವತಿಯಿಂದಲೂ ಬಾಲಕಿಗೆ ₹4,00,000 ಹೆಚ್ಚುವರಿ ಪರಿಹಾರ ನೀಡುವಂತೆ ನ್ಯಾಯಾಧೀಶರು ನಿರ್ದೇಶಿಸಿದ್ದಾರೆ.