10 ವರ್ಷ ಜೈಲು ಶಿಕ್ಷೆ, ₹1.20 ಲಕ್ಷ ದಂಡ, ಶಿವಮೊಗ್ಗ ಕೋರ್ಟ್‌ ಆದೇಶ, ಏನಿದು ಕೇಸ್‌?

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ 24 ವರ್ಷದ ಯುವಕನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.20 ಲಕ್ಷ ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ತೀರ್ಪು ನೀಡಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಇನ್‌ಸ್ಪೆಕ್ಟರ್ ಗುರುರಾಜ್ ಕೆ.ಟಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಲಯ ಸೂಚಿಸಿದೆ.

Shivamogga-Court-Building

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.