| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ್ದ ಬಗ್ಗೆ ಮಾಳೂರು ಪೊಲೀಸ್ ಠಾಣೆಯಲ್ಲಿ 2024ರ ಮೇ 10ರಂದು ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ಶಿವಾನಂದ ಧರಣ್ಣನವರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ (Shivamogga Court) ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
![]()
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಮಹಿಳೆಗೆ KFD ಪಾಸಿಟಿವ್, ಸರ್ವೇಕ್ಷಣಾಧಿಕಾರಿ ಏನಂದ್ರು? ಚಿಕಿತ್ಸೆಗೆ ಏನೆಲ್ಲ ವ್ಯವಸ್ಥೆಯಾಗಿದೆ?
ಸರ್ಕಾರಿ ವಕೀಲರಾದ ಮಮತಾ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಭಯ್ ಚೌಗಲಾ ತೀರ್ಪು ಪ್ರಕಟಿಸಿದ್ದಾರೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
- ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
- ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ
![]()