ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

ಶಿವಮೊಗ್ಗ: ನಗರದ ಕೃಷಿ ಕಾಲೇಜಿನ ಸಮೀಪ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಇಆರ್‌ಎಸ್‌ಎಸ್ 112 ಸಿಬ್ಬಂದಿ ರಕ್ಷಿಸಿದ್ದಾರೆ (youth’s life). ಸ್ಥಳೀಯ ಯುವಕ ಮರವೊಂದಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಳ್ಳಲು ಮುಂದಾಗಿದ್ದ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ – ಕಾರ್ಗಲ್‌ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Youth-rescued-by-112-ERSS-Police-in-Shimoga-Navule.

ಇದನ್ನು ಗಮನಿಸಿದ್ದ ಸ್ಥಳೀಯರು 112 ಸಹಾಯವಾಣಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ವಿನೋಬನಗರ ಪೊಲೀಸ್ ಠಾಣೆಯ ಎಎಸ್‌ಐ ಹೇಮಾವತಿ ಹಾಗೂ ಇಆರ್‌ವಿ ವಾಹನದ ಚಾಲಕ ಅಣ್ಣಪ್ಪ ಯುವಕನ ರಕ್ಷಣೆಗೆ ಮಾಡಿದ್ದಾರೆ.

Youth-rescued-by-112-ERSS-Police-in-Shimoga-Navule.

ನೇಣು ಹಾಕಿಕೊಂಡು ಒದ್ದಾಡುತ್ತಿದ್ದ ಆತನನ್ನು ಕೆಳಗಿಳಿಸಿ ಪ್ರಥಮ ಚಿಕಿತ್ಸೆ ಒದಗಿಸುವ ಮೂಲಕ ಪಾರು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಆತನಿಗೆ ಬುದ್ಧಿವಾದ ಹೇಳಿ ಕುಟುಂಬಸ್ಥರೊಂದಿಗೆ ಕಳುಹಿಸಿದ್ದಾರೆ.

Sunrise Facility Services, Sri sai Trust Shimoga

Leave a Comment