ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JANUARY 2024
SHIMOGA : ಕೆನ್ನೆಗೆ ಹೊಡೆದು, ಕತ್ತು ಹಿಸುಕಲು ಯತ್ನಿಸಿದ ತಂದೆ ವಿರುದ್ಧ ಬಾಲಕಿ ದೂರು ನೀಡಿದ್ದಾಳೆ. ಬಾಲಕಿ, ಸಹೋದರ ಮತ್ತು ತಾಯಿಗೆ ಆಕೆಯ ತಂದೆ ಹಿಂಸೆ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ.
ಏನಿದು ಪ್ರಕರಣ?
ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ, ಆಕೆಯ ಸಹೋದರನ ಶಾಲೆ ಬಳಿ ಬಂದು ತಂದೆ ಅವಾಚ್ಯವಾಗಿ ನಿಂದಿಸುತ್ತಿದ್ದಾನೆ. ಮನೆಯಲ್ಲಿ ನಿತ್ಯ ತಾಯಿ, ಬಾಲಕಿ ಮತ್ತು ಸಹೋದರನಿಗೆ ದೈಹಿಕ ಹಿಂಸೆ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಜ.23ರಂದು ಬಾಲಕಿ ಮತ್ತು ಸಹೋದರನ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಕೇಕ್ ಮತ್ತು ಆಹಾರವನ್ನು ಚೆಲ್ಲಿದ್ದಾನೆ. ಮೂವರಿಗು ದೈಹಿಕ ಹಿಂಸೆ ನೀಡಿದ್ದಾನೆ. ಬಾಲಕಿಯ ಕೆನ್ನೆಗೆ ಹೊಡೆದು ಕುತ್ತಿಗೆ ಹಿಸುಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತರ ಪ್ರಕರಣವಾದ್ದರಿಂದ ಊರು, ಮಕ್ಕಳ ಹೆಸರು ಗೌಪ್ಯವಾಗಿರಿಸಲಾಗಿದೆ.
ಇದನ್ನೂ ಓದಿ – ಫೇಸ್‌ಬುಕ್‌ನಲ್ಲಿ ರಿಲ್ಸ್ ಹಾಕಿದ್ದವನ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





