ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಸೀಗೆಹಟ್ಟಿಯ ಯುವಕ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಫೆ.23ರ ರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಫೆ.23ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಏನೆಲ್ಲ ನಿಷೇಧವಿರುತ್ತೆ?
» ಮೆರವಣಿಗೆ, ಪ್ರತಿಭಟನೆ ಸೇರಿದಂತೆ ಎಲ್ಲಾ ಬಗೆಯ ಸಭೆ, ಸಮಾರಂಭಗಳನ್ನು ನಿಷೇಧ ಮಾಡಲಾಗಿದೆ.
» ಶಸ್ತ್ರಗಳು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೆ ರೀತಿಯ ಮಾರಕಾಸ್ತ್ರಗಳನ್ನು ಒಯ್ಯುವುದು, ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಒಯ್ಯುವುದು ನಿಷೇಧಿಸಲಾಗಿದೆ.
» ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಧಿಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ತುರ್ತು ಸಂದರ್ಭ ದ್ವಿಚಕ್ರ ವಾಹನಗಳ ಸಂಚಾರ ಮಾಡುವವರು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ಪಾಸ್ ಪಡೆಯಬೇಕು.
» ಎಲ್ಲಾ ಅಂಗಡಿಗಳ ಬಾಗಿಲಯನ್ನು ರಾತ್ರಿ 9 ಗಂಟೆಯೊಳಗೆ ಮುಚ್ಚಬೇಕು.
» ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ರಾತ್ರಿ 9 ಗಂಟೆ ನಂತರ ಪ್ರದರ್ಶನ ನಿಷೇಧಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ, ಬಿಗಿ ಬಂದೋಬಸ್ತ್
ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ, ಬಿಗುವಿನ ವಾತಾವರಣ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422