ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಶನಿವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಯಿಂದ ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ನಿಷೇಧಾಜ್ಞೆಗೆ ಕಾರಣವೇನು?
ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಕೋಮಿನ ನಡುವೆ ಗಲಾಟೆಯಾಗಿದ್ದು, ಶಾಂತಿ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ವೇಳೆ ಏನಿರುತ್ತೆ? ಏನಿರಲ್ಲ?
- ಐದಕ್ಕಿಂತಲೂ ಹೆಚ್ಚು ಜನರು ಒಂದು ಕಡೆ ಗುಂಪುಗೂಡುವಂತಿಲ್ಲ
- ಮೆರವಣಿಗೆ, ಸಭೆ, ಸಮಾರಂಭ, ಸಮಾವೇಶಗಳನ್ನು ನಡೆಸಲು ಅವಕಾಶವಿಲ್ಲ.
- ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು, ಶೇಖರಿಸುವುದಕ್ಕೆ ನಿಷೇಧವಿದೆ.
- ಪಟಾಕಿ ಸೇರಿದಂತೆ ಯಾವುದೆ ಬಗೆಯ ಸ್ಪೋಟಕಗಳನ್ನು ಬಳಸುವುದು ಮತ್ತು ಶೇಖರಿಸುವಂತಿಲ್ಲ.
- ಯಾವುದೆ ವ್ಯಕ್ತಿಯ ಪ್ರತಿಕೃತಿ ದಹಿಸುವುದು, ಸಂಜ್ಞೆ ಮೂಲಕ, ಸಂಗೀತ, ಚಿತ್ರಗಳು, ಸಂಕೇತಗಳನ್ನು ಪ್ರದರ್ಶನ ಮಾಡುವಂತಿಲ್ಲ.
- ಖಾಸಗಿ ಅಥವಾ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವಂತಿಲ್ಲ. ಸರ್ಕಾರಿ ಅಧಿಕಾರಿಗಳ ಆಜ್ಞೆ ವಿರೋಧಿಸುವಂತಿಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]