ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA NEWS, 10 NOVEMBER 2024 : ಕಡ್ಡಾಯವಿದ್ದರು ಮೀಟರ್‌ ಬಳಸದ ಆಟೋ (Auto) ಚಾಲಕರಿಗೆ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಸಿದ ಪೊಲೀಸರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅಟೋಗಳನ್ನು ವಶಕ್ಕೆ ಪಡೆದಿದ್ದಾರೆ.

20 ಆಟೋ ವಶಕ್ಕೆ, 100 ಕೇಸ್‌

ಮೀಟರ್ ಬಳಕೆ ಮಾಡದ 20 ಆಟೊಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಯಮ ಉಲ್ಲಂಘಿಸಿದ ಆಟೊ ಚಾಲಕರ ವಿರುದ್ಧ ಐಎಂವಿ ಕಾಯಿದೆ ಅಡಿ 100 ಪ್ರಕರಣಗಳನ್ನು ದಾಖಲಿಸಿದ್ದಾರೆ.

Traffic-Police-check-auto-for-meter

ಆಟೋ ಮೀಟರ್ ಬಳಸದೇ ಇರುವುದು, ಹೆಚ್ಚಿನ ದರ ಕೇಳುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರು ಪ್ರಯಾಣಿಸುವ ಸಮಯದಲ್ಲಿ ಆಟೊಗಳಲ್ಲಿ ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸಲಾಗಿದೆ. ಈ ವೇಳೆ ನಿಯಮ ಉಲ್ಲಂಘನೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

Auto Meter checking

ಇದನ್ನೂ ಓದಿ » ಶಾಲೆ ಮುಗಿಸಿ ಮನೆಗೆ ಬಂದು ನೇಣಿಗೆ ಕೊರಳೊಡ್ಡಿದ ಬಾಲಕಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment