ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಶಿವಮೊಗ್ಗ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Jail) ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ.

ಏನಿದು ಕೇಸ್‌?

2022ರಲ್ಲಿ ಭದ್ರಾವತಿ ನ್ಯೂ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 19 ವರ್ಷದ ಯುವಕನೊಬ್ಬ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿ ನೀಡಿದ್ದ ದೂರಿನ ಹಿನ್ನೆಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಭದ್ರಾವತಿ ನಗರದ ಇನ್ಸ್‌ಪೆಕ್ಟರ್‌ ಆಗಿದ್ದ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Shivamogga-Court-Balaraja-Urs-Road

20 ವರ್ಷ ಜೈಲು, ದಂಡ

ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಒಂದನೇ ಎಫ್‌ಟಿಎಸ್‌ಸಿ ನ್ಯಾಯಾಧೀಶರಾದ ಮೋಹನ್‌ .ಜೆ.ಎಸ್‌, ಆರೋಪ ಸಾಬೀತಾದ ಹಿನ್ನೆಲೆ 19 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಿದ್ದಾರೆ. ಯುವಕರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 2.01 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸದೆ ಇದ್ದರೆ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

Parishrama advt 10 feb 2025 (1)
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರ್ಕಾರದ ವತಿಯಿಂದ 2 ಲಕ್ಷ ರೂ. ವನ್ನು ಬಾಲಕಿಗೆ ಪರಿಹಾರದ ರೂಪವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸರ್ಕಾರಿ ಅಭಿಯೋಜಕ ಶ್ರೀಧರ್‌ ಹೆಚ್‌.ಆರ್‌ ಸರ್ಕಾರದ ಪರವಾಗಿ ವಾದಿಸಿದ್ದರು.

NATIONAL-PUBLIC-SCHOOL-scaled

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆ ವಾರ್ಡ್‌ನಲ್ಲೇ ಪತ್ನಿಯ ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ ಪತಿ, ವಿಡಿಯೋ ವೈರಲ್

Shivamogga-Court-Balaraja-Urs-Road

Leave a Comment