ಶಿವಮೊಗ್ಗದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹2,00,000 ಲಕ್ಷ ದಂಡ, ಕಾರಣವೇನು?

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು (prison) ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಏನಿದು ಕೇಸ್?‌ ಯಾವಾಗ ಆಗಿದ್ದು?

ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯ ಮೇಲೆ 30 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Shivamogga-Court-Balaraja-Urs-Road

Shivamogga-Court-Balaraja-Urs-Road

ತನಿಖೆ, ವಿಚಾರಣೆ, ದೋಷಾರೋಪ ಪಟ್ಟಿ

ಪ್ರಕರಣದ ಅಂದಿನ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ತಿಪ್ಪೆಸ್ವಾಮಿ.ಎಂ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಇಲ್ಲಿದೆ ತೀರ್ಪಿನ ಹೈಲೈಟ್ಸ್‌.

  • ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ.
  • ₹2,00,000 ದಂಡ ವಿಧಿಸಲಾಗಿದೆ.
  • ನೊಂದ ಬಾಲಕಿಗೆ ₹1,80,000 ಪರಿಹಾರ ನೀಡಲು ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಚೇಸ್‌ ಮಾಡಿ ಕಾರು ಅಡ್ಡಗಟ್ಟಿದ ಮಹಿಳೆಯರು, ಗ್ಲಾಸ್‌ ಪೀಸ್‌ ಪೀಸ್‌

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment