ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 FEBRUARY 2024
SHIMOGA : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆ 25 ವರ್ಷದ ಯುವಕನಿಗೆ ಇಲ್ಲಿನ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದ ಹಿನ್ನೆಲೆ
2022ರಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ನೊಂದ ಬಾಲಕಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಹೊಸನಗರ ಠಾಣೆ ಸಿಪಿಐ ಬಿ.ಸಿ.ಗಿರೀಶ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ – ಎರಡೆ ದಿನಕ್ಕೆ ಕುವೆಂಪು ವಿವಿ ಕುಲಸಚಿವರು ಬದಲು, ಅಧಿಕಾರ ಸ್ವೀಕಾರಕ್ಕು ಮುನ್ನವೆ ಹೊಸಬರ ನೇಮಕ
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಹರಿಪ್ರಸಾದ್ ವಾದ ಮಂಡಿಸಿ ದರು. ವಿಚಾರಣೆ ನಡೆಸಿದ ನ್ಯಾಯಾಧಿಶರಾದ ಲತಾ ಆರೋಪಿಗೆ ಶಿಕ್ಷೆ ವಿಧಿಸಿ ಅದೇಶಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ 4 ತಿಂಗಳು ಸಾದಾ ಸೆರೆವಾಸದ ಶಿಕ್ಷೆ ವಿಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422