ಶಿವಮೊಗ್ಗದ 22 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, ಕಾರಣವೇನು?

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಸಜೆ ಮತ್ತು ₹1.10 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ತಾಲೂಕಿನ ಗ್ರಾಮವೊಂದರ 22 ವರ್ಷದ ಯುವಕ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ತುಂಗಾ ನಗರ ಠಾಣೆ ಪೊಲೀಸರು ಯುವಕನ ವಿರುದ್ಧ ಪೋಕೋ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ.ಪಾಟೀಲ್ ಅವರು, ಆರೋಪ ದೃಢಪಟ್ಟ ಹಿನ್ನೆಲೆ ಯುವಕನಿಗೆ 20 ವರ್ಷ ಕಠಿಣ ಸಜೆ, ₹1.10 ಲಕ್ಷ ದಂಡ ವಿಧಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ₹5 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಶ್ರೀಧರ್ ವಾದಿಸಿದ್ದರು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Shivamogga-Court-Building