ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 13 JULY 2024
SHIMOGA : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಮಾಲೀಕನಿಗೆ ಶಿವಮೊಗ್ಗದ ನ್ಯಾಯಾಲಯ 27 ಸಾವಿರ ರೂ. ದಂಡ (Fine) ವಿಧಿಸಿದೆ. ಏ.26ರಂದು ಸಿಟಿ ಸೆಂಟರ್ ಬಳಿ ಸಂಚಾರ ಪೊಲೀಸರು ವಾಹನ ತಪಾಸಣೆ ಸಂದರ್ಭ ಅಪ್ರಾಪ್ತನೊಬ್ಬ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಚಲಾಯಿಸುತ್ತಿದ್ದ.
ಈ ಸಂಬಂಧ ಬೈಕ್ ಮಾಲೀಕ ಎಂ.ಮುಜೀಬ್ ವಿರುದ್ಧ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಬೈಕ್ ಮಾಲೀಕನಿಗೆ 27 ಸಾವಿರ ರೂ. ದಂಡ ವಿಧಿಸಿದ್ದಾರೆ.

ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್, ಸಿಬ್ಬಂದಿ ಎಸ್.ಕೆ.ಪದ್ಮರಾಜ್, ಎ.ಕೆ.ಪ್ರಕಾಶ್ ವಾಹನ ತಪಾಸಣೆ ಮಾಡಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ಇಂಡಿಗೋ ವಿಮಾನ, ಹೋಮ್ ಮಿನಿಸ್ಟರ್ ಬೆಂಗಳೂರಿಗೆ ವಾಪಸ್


