SHIVAMOGGA LIVE | 28 JUNE 2023
SHIMOGA : ಹನ್ನೊಂದು ವರ್ಷದ ಬಾಲಕಿಗೆ ಲೈಂಗಿಕ ಕಿರಿಕುಳ ನೀಡಿದ ವ್ಯಕ್ತಿಗೆ ನ್ಯಾಯಾಲಯವು 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Imprisonment) ಮತ್ತು 2.80 ಲಕ್ಷ ರೂ. ದಂಡ ವಿಧಿಸಿದೆ.

2019ರಲ್ಲಿ ಭದ್ರಾವತಿಯಲ್ಲಿ 23 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ದೂರು ನೀಡಿದ್ದಳು. ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಎನ್.ನಂಜಪ್ಪ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ – ಲಂಚದ ಹಣ ಪಡೆಯುತ್ತಿದ್ದಾಗ ಮಹಿಳಾ ಅಧಿಕಾರಿ ಎದುರಿಗೆ ಲೋಕಾಯುಕ್ತ ಪೊಲೀಸರು ಪ್ರತ್ಯಕ್ಷ
ವಿಚಾರಣೆ ನಡೆಸಿದ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ (Imprisonment) ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.





