ಭದ್ರಾವತಿಯ ಯುವಕನಿಗೆ 3 ವರ್ಷ ಜೈಲು ಶಿಕ್ಷೆ, ₹31,000 ದಂಡ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾಗಿದ್ದು, ಯುವಕನಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹31,000 ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಭದ್ರಾವತಿ ತಾಲೂಕಿನ 20 ವರ್ಷದ ಯುವಕ 2024ರಲ್ಲಿ 16 ವರ್ಷದ ಬಾಲಕಿಗೆ ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಪಿಎಸ್‌ಐ ಕವಿತಾ ಇ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

Shivamogga-Court-Building

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ.