27 ವರ್ಷದ ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, ₹50,000 ದಂಡ

ಶಿವಮೊಗ್ಗ: 13 ವರ್ಷದ ಮಾನಸಿಕ ಅಸ್ವಸ್ಥೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 27 ವರ್ಷದ ಯುವಕನಿಗೆ 3 ವರ್ಷ ಕಠಿಣ ಕಾರಾಗೃಹವಾಸ ಹಾಗೂ ₹50,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪಿಎಸ್‌ಐ ರಾಜುರೆಡ್ಡಿ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

Shivamogga-Court-Building

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ದಂಡದ ಮೊತ್ತದ ಜೊತೆಗೆ, ಸಂತ್ರಸ್ತ ಬಾಲಕಿಗೆ ₹40,000 ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ಆದೇಶಿಸಿದ್ದಾರೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.