ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JULY 2024
SHIMOGA : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟಿದ್ದ ಬಂಗಾರದ ಆಭರಣ (Jewels) ಕಳ್ಳತನ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಸ್ ನಿಲ್ದಾಣದಲ್ಲಿನ ಏಳು ಕಳ್ಳತನ ಪ್ರಕರಣಗಳ ಕುರಿತು ಬಾಯಿ ಬಿಟಿದ್ದಾರೆ.
ಆರೋಪಿತ ಮಹಿಳೆಯರೆಲ್ಲ ಭದ್ರಾವತಿಯವರು
ಬಂಧಿತ ಮಹಿಳೆಯರೆಲ್ಲ ಭದ್ರಾವತಿಯವರು. ಹೊಸಮನೆಯ ಶಾಂತಿ ಅಲಿಯಾಸ್ ಕರ್ಕಿ (31), ಹನುಮಂತ ನಗರದ ಮೀನಾಕ್ಷಿ (38), ಸಾವಿತ್ರಿ ಅಲಿಯಾಸ್ ಬಾಬಾ (29), ಭೋವಿ ಕಾಲೋನಿಯ ದುರ್ಗಾ ಅಲಿಯಾಸ್ ಸಣ್ಣ ದುರ್ಗಾ (29), ಸುಶೀಲಮ್ಮ (66) ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
7 ಕೇಸ್, ಲಕ್ಷ ಲಕ್ಷದ ಒಡವೆ
ಜೂ.29ರಂದು ಮಹಿಳೆಯೊಬ್ಬರು ದಾವಣಗೆರೆಯಲ್ಲಿ ಸಂಬಂಧಿಯೊಬ್ಬರ ಮದುವೆ ಸಮಾರಂಭಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಫೋನ್ ತೆಗೆದುಕೊಳ್ಳಲು ಮುಂದಾದಾಗ ಬ್ಯಾಗ್ ತೆರೆದುಕೊಂಡಿದ್ದು ಗಮನಕ್ಕೆ ಬಂತು. ಪರಿಶೀಲಿಸಿದಾಗ ಬ್ಯಾಗಿನಲ್ಲಿದ್ದ ಆಭರಣ ನಾಪತ್ತೆಯಾಗಿದ್ದವು. ಈ ಸಂಬಂಧ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಐವರು ಮಹಿಳೆಯರನ್ನು ಬಂಧಿಸಲಾಗಿದೆ.

ವಿಚಾರಣೆ ವೇಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಒಟ್ಟು 7 ಕಳ್ಳತನ ಪ್ರಕರಣಗಳ ಕುರಿತು ಬಾಯಿ ಬಿಟ್ಟಿದ್ದಾರೆ. 8.13 ಲಕ್ಷ ರೂ.ಮೌಲ್ಯದ 122 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇನ್ಸ್‌ಪೆಕ್ಟರ್ ರವಿ ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಎಎಸ್‌ಐ ನಾಗರಾಜ್, ಸಿಬ್ಬಂದಿ ಪಾಲಾಕ್ಷ ನಾಯ್ಕ, ಲಚ್ಚಾ ನಾಯ್ಕ್, ಚಂದ್ರನಾಯ್ಕ, ಗುರುನಾಯ್ಕ, ನಿತಿನ್, ಪುನಿತ್ ರಾವ್, ಪ್ರಕಾಶ್, ದೀಪಾ ಎಸ್.ಹುಬ್ಬಳ್ಳಿ, ಪೂಜಾ, ಸುಮಿತ್ರಾ ಬಾಯಿ, ಲಕ್ಷ್ಮಿ ಅವರನ್ನು ಒಳಗೊಂಡ ತಂಡ ಆರೋಪಿತರನ್ನು ಬಂಧಿಸಿದೆ.
ಇದನ್ನೂ ಓದಿ ⇓
ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















