20 ವರ್ಷದ ಯುವಕನಿಗೆ ಕಠಿಣ ಜೈಲು ಶಿಕ್ಷೆ, ₹1.62 ಲಕ್ಷ ದಂಡ, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ ಚಿನ್ನದ ಸರವನ್ನು ಮೋಸದಿಂದ ಪಡೆದುಕೊಂಡ ಆರೋಪ ಸಾಬೀತಾದ ಹಿನ್ನೆಲೆ 20 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.62 ಲಕ್ಷ ದಂಡ ವಿಧಿಸಿದೆ.

2022ರಲ್ಲಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂಸಿ ಠಾಣೆಯ ಅಂದಿನ ಪಿಎಸ್‌ಐ ಕೃಷ್ಣಾ ನಾಯ್ಕ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಶ್ರೀಧರ್ ವಾದ ಮಂಡಿಸಿದ್ದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ತೀರ್ಪು ಪ್ರಕಟಿಸಿದ್ದು, ದಂಡದ ಮೊತ್ತದಲ್ಲಿ ₹62,000 ಮೊತ್ತವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ.

Shivamogga-Court-Building