‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್‌ನಲ್ಲಿ ಈತನಕ ಅರೆಸ್ಟ್‌ ಆದವರೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 OCTOBER 2023

SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ (Stone Pelting) ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಘಟನೆಯಲ್ಲಿ ಒಂದು ಕಾರು, ಆಟೋ, ಎರಡು ಬೈಕುಗಳಿಗೆ ಹಾನಿಯಾಗಿದೆ. 7 ಮನೆಗಳ ಮೇಲೆ ಕಲ್ಲು ತೂರಾಟವಾಗಿತ್ತು. ಅರ್ಧ ಗಂಟೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಶಿವಮೊಗ್ಗ ನಗರದ ಉಳಿದ ಯಾವ ಭಾಗದಲ್ಲಿಯು ಸಮಸ್ಯೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಗಾಂಧಿ ಬಜಾರ್‌ ವ್ಯಾಪಾರಿಗಳದ್ದು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಸ್ಥಿತಿ

ಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಯಾವುದೆ ಧಗ ಧಗ, ಕೊತ ಕೊತ ಇಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅತ್ಯವಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2023

Leave a Comment