ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

ಶಿವಮೊಗ್ಗ: 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು (Girl) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭ ಕೃತ್ಯ ನಡೆದಿದೆ ಎನ್ನಲಾಗಿದೆ. ಸಂಜೆ ಪೋಷಕರು ಮನೆಗೆ ಮರಳಿದಾಗ ಬಾಲಕಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.

Vinobanagara-Police-Station.avif

ಇದನ್ನೂ ಓದಿ : ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment