ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ.
2021ರ ಆಗಸ್ಟ್ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು ಬಂಧಿಸಲಾಗಿತ್ತು. ಕೋಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಶೇಖರ್.ಟಿ.ಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ವಿಚಾರಣೆ ಬಳಿಕ ಅಜ್ಗರ್ ಖಾನ್‌ಗೆ ನ್ಯಾಯಾಧೀಶರಾದ ಯಶವಂತ್ ಕುಮಾರ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗದ ಅರಣ್ಯ ರಕ್ಷಕ ಎಂ.ಸಲೀಂಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ