ಅಪರಾಧ ಸಾಬೀತು, 7 ವರ್ಷ ಜೈಲು ಶಿಕ್ಷೆ, ₹10,000 ದಂಡ, ಎನಿದು ಪ್ರಕರಣ?

ಶಿವಮೊಗ್ಗ: ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಲಾಗಿದೆ. ಫೈರೋಜ್ ಖಾನ್ (39) ಎಂಬಾತನಿಗೆ ಶಿಕ್ಷೆ ವಿಧಿಸಿ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. (ಈ ಸುದ್ದಿಯನ್ನು ಇನ್ನು 51 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಹಣವಿಲ್ಲ ಅಂದಿದ್ದಕ್ಕೆ ಗಲಾಟೆ

2025ರ ಏಪ್ರಿಲ್ 27ರ ರಾತ್ರಿ ನಗರದ ಬಿ.ಹೆಚ್. ರಸ್ತೆಯ ಬಾರ್ ಬಳಿ ಶಶಿನಾಯ್ಕ್ ಹಾಗೂ ನಾಗೇಶ್ ನಾಯ್ಕ್ ನಡೆದು ಹೋಗುತ್ತಿದ್ದರು. ಈ ವೇಳೆ ಆರೋಪಿ ಫೈರೋಜ್ ಖಾನ್ ಹಣ ನೀಡುವಂತೆ ಕೇಳಿದ್ದ. ಹಣವಿಲ್ಲ ಎಂದು ತಿಳಿಸಿದ ಶಶಿನಾಯ್ಕ್ ಅವರೊಂದಿಗೆ ಗಲಾಟೆ ಮಾಡಿದ್ದ. ಬಳಿಕ ತನ್ನ ಬ್ಯಾಗಿನಲ್ಲಿದ್ದ ಎರಡು ಚಾಕುಗಳಿಂದ ಶಶಿನಾಯ್ಕ್ ಅವರ ಕುತ್ತಿಗೆ, ಭುಜ, ಹೊಟ್ಟೆ ಹಾಗೂ ಬೆನ್ನಿನ ಭಾಗಗಳಿಗೆ ಇರಿದು ಕೊಲೆ ಮಾಡಿದ್ದ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Shivamogga-Court-Building

ಆರೋಪ ಸಾಬೀತು, ಶಿಕ್ಷೆ ಪ್ರಕಟ

ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ರವಿ ಪಾಟೀಲ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಕುಮಾರ್ ಅವರು, ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: