ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 14 SEPTEMBER 2024 : 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 70 ವರ್ಷದ (Year) ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 2.10 ಲಕ್ಷ ರೂ. ದಂಡ ವಿಧಿಸಿ ಅದೇಶಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ. ಬಾಲಕಿಗೆ ಪರಿಹಾರ ರೂಪದಲ್ಲಿ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಹಾಗೂ ಸರ್ಕಾರದಿಂದ 2 ಲಕ್ಷ ರೂ. ನೀಡಲು ಆದೇಶಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭದ್ರಾವತಿ ತಾಲ್ಲೂಕಿನಲ್ಲಿ 2023ರಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಗಮನಿಸಿದ ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಹೊಳೆಹೊನ್ನೂರು ಠಾಣೆ ಇನ್‌ಸ್ಪೆಕ್ಟರ್ ಆರ್.ಎಲ್.ಲಕ್ಷ್ಮೀಪತಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದೆ. ಸರ್ಕಾರದ ಪರವಾಗಿ ವಕೀಲ ಎಚ್.ಆರ್.ಶ್ರೀಧರ ವಾದ ಮಂಡಿಸಿದರು.
ಇದನ್ನೂ ಓದಿ » ಸವಳಂಗ ರಸ್ತೆ ಮೇಲ್ಸೇತುವೆ, ಒಂಭತ್ತೇ ತಿಂಗಳಲ್ಲಿ ಇದೆಂಥಾ ಅವಸ್ಥೆ?
» ENGLISH UPDATE A 70-year-old man was sentenced to 20 years rigorous imprisonment and fined ₹2.10 lakh for sexually assaulting a 9-year-old girl in Bhadravati taluk in 2023. The victim’s mother had filed a case under POCSO Act. The court also ordered compensation to the victim from the state government