ಶಿವಮೊಗ್ಗ ಲೈವ್
ಶಿವಮೊಗ್ಗ: ಮನೆಯಲ್ಲಿ ಯಾರು ಇಲ್ಲದ ಸಂದರ್ಭ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಆಕೆ, ಪೋಷಕರು ರಾಯರ ಆರಾಧನೆ ಅಂಗವಾಗಿ ರಾಘವೇಂದ್ರ ಸ್ವಾಮಿ ಮಠಕ್ಕೆ ಹೋಗಿದ್ದಾಗ ಮನೆಯಲ್ಲೇ ಉಳಿದಿದ್ದಳು. ಅವರು ವಾಪಸ್ ಬರುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್‌ನೋಟ್ ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದಾರೆ.
