ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಹೊನ್ನಾಳಿಯ ಯುವಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ, ಯಾಕೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನಿಗೆ ಕಲ್ಲಿನಿಂದ (stones) ಹೊಡೆದು ಆತನ ಸಂಬಂಧಿಕರೆ ಹಲ್ಲೆ ನಡೆಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಘಟನೆಗೆ ಕಾರಣವೇನು?

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಶಾಂತ ಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆ ಕೊಡಿಸಲು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತ ಕುಮಾರ್ ಅವರು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಹೊರಗೆ ನಿಂತಿದ್ದಾಗ, ಅವರ ಸಂಬಂಧಿಕರು ಅಲ್ಲಿಗೆ ಬಂದಿದ್ದಾರೆ. ಆಸ್ತಿ ವಿಚಾರದ ಹಳೆ ದ್ವೇಷದ ಹಿನ್ನೆಲೆ ಮತ್ತು ತಾಯಿಯ ಅನಾರೋಗ್ಯದ ವಿಷಯ ತಮಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ಶಾಂತ ಕುಮಾರ್ ಅವರೊಂದಿಗೆ ಜಗಳ ತೆಗೆದಿದ್ದಾರೆ ಎಂದು ಆರೋಪಿಸಲಾಗಿದೆ.

160125 mc gann hospital general image

ಇದನ್ನೂ ಓದಿ » ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಬಟ್ಟೆ ಅಂಗಡಿ, ಜ್ಯೂಸ್‌ ಸೆಂಟರ್‌

ಈ ವೇಳೆ ಅಲ್ಲೇ ಬಿದ್ದಿದ್ದ ಜೆಲ್ಲಿ ಕಲ್ಲಿನಿಂದ ಶಾಂತ ಕುಮಾರ್ ಅವರ ತಲೆಗೆ ಹೊಡೆದು ರಕ್ತಗಾಯ ಮಾಡಿ ಬೀಳಿಸಿದ್ದಾರೆ. ಅಷ್ಟೇ ಅಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಸಹಿತ ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment