ಶಿವಮೊಗ್ಗದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ, ಕೊಠಡಿಯಲ್ಲಿ ಪರಿಶೀಲನೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿರುವ ಅಧಿಕಾರಿಯೊಬ್ಬರ ಮನೆಗೂ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನಗರ ಯೋಜನಾ ನಿರ್ದೇಶಕ ಕೃಷ್ಣಪ್ಪ ಅವರ ಶಿವಮೊಗ್ಗ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಇಲ್ಲಿನ ಶಿವಪ್ಪನಾಯಕ ಬಡಾವಣೆಯಲ್ಲಿ ಕೃಷ್ಣಪ್ಪ ಅವರ ಮನೆ ಇದೆ.

Shivamogga Live Promotion

ಕೃಷ್ಣಪ್ಪ ಇಲ್ಲಿ ಮನೆ ಕಟ್ಟಿಸಿ ಬಾಡಿಗೆಗೆ ನೀಡಿದ್ದಾರೆ. ಶಿವಮೊಗ್ಗಕ್ಕೆ ಬಂದಾಗ ಉಳಿಯಲು ಒಂದು ಕೊಠಡಿ ಉಳಿಸಿಕೊಂಡಿದ್ದಾರೆ. ಇವತ್ತು ಬೆಳಗ್ಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕೊಠಡಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆ ಎಸಿಬಿ ಎಸ್‍ಪಿ ಜನಪ್ರಕಾಶ್ ನೇತೃತ್ವದಲ್ಲಿ ದಾಳಿ ನಡಸಲಾಗಿದೆ. ಕೃಷ್ಣಪ್ಪ ಅವರಿಗೆ ಸಂಬಂಧಿಸಿದ ಮನೆ, ಕಟ್ಟಡಗಳ ಮೇಲೆ ರಾಜ್ಯದ ವಿವಿಧೆಡೆ ದಾಳಿ ಮಾಡಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment