ಶಿವಮೊಗ್ಗದಲ್ಲಿ ಎಸಿಬಿ ಅಧಿಕಾರಿಗಳ ದಾಳಿ, ಲಂಚ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019

ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಸಹಾಯಕ ನಿರ್ದೇಶಕ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆಯಲ್ಲಿ ಶಾಮಿಯಾನ ಅಂಗಡಿ ತೆರೆಯಲು ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸು ಮಾಡಲು ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಹೊಸನಗರ ತಾಲೂಕು ಹುಲಿಗದ್ದೆ ಗ್ರಾಮದ ಅಖಿಲ್ ಅಹಮದ್ ಎಂಬುವವರಿಂದ ಶಿವಮೊಗ್ಗ ಎಪಿಎಂಸಿ ಬಳಿ ರಾತ್ರಿ, ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಲ್.ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಲಾಗಿದೆ.

ಎಸಿಬಿ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ, ವೀರೇಂದ್ರ, ಸಿಬ್ಬಂದಿಗಳಾದ ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment