ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಬಂಧಿತರು. ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಸಾಮ್ಯಾ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ.
ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಎನ್.ವೀರೇಂದ್ರ, ಸಿಬ್ಬಂದಿಗಳಾದ ಕೆ.ವಸಂತ, ನಾಗರಾಜ್, ರಘು ನಾಯ್ಕ, ಸುರೇಂದ್ರ, ಶ್ರೀನಿವಾಸ್, ಹರೀಶ್ ದಾಳಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]