ಭದ್ರಾವತಿಯಲ್ಲಿ 70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

Published On : ಜನವರಿ 11, 2022

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022

70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಭದ್ರಾವತಿಯ ಬಿಳಕಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ಅವರ ಮೇಲೆ ದಾಳಿ ನಡೆಸಲಾಗಿದೆ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ.

ಜಮೀನು ಒಂದರ ಸಂಬಂಧ ಎನ್.ಒ.ಸಿ ನೀಡಲು ಕೇಶವಮೂರ್ತಿ, ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಐದು ಸಾವಿರ ರೂ. ಪಡೆದುಕೊಂಡಿದ್ದರು. ಇವತ್ತು 70 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಎಸಿಬಿ ಡಿವೈಎಸ್’ಪಿ ಲೋಕೇಶ್ ಮಾರ್ಗದರ್ಶನದಲ್ಲಿ, ಇನ್ಸ್’ಪೆಕ್ಟರ್ ವಸಂತ ಕುಮಾರ್, ಪಿಎಸ್ಐ ಇಮ್ರಾನ್ ಬೇಗ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ABOUT ME DECEMBER REPORT

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 11, 2022

Leave a Comment