ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019
ಕಾಂಟ್ರಾಕ್ಟರ್ ಲೈಸೆನ್ಸ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದುರ್ಗಿಗುಡಿಯಲ್ಲಿ ಇಂದು ಸಂಜೆ ದಾಳಿ ನಡೆಸಿ, ಅಧಿಕಾರಿಯನ್ನು ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲೋಕೋಪಯೋಗಿ ಇಲಾಖೆ ಕಚೇರಿ ವ್ಯವಸ್ಥಾಪಕ ಶೇಖ್ ಮೊಹಮ್ಮದ್ ರಫಿ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದಾವಣಗೆರೆಯ ಜಗಳೂರಿನ ವೈ.ಪಿ.ಸಿದ್ದನಗೌಡ ಅವರಿಗೆ ಕ್ಲಾಸ್ 3 ಕಾಂಟ್ರಾಕ್ಟರ್ ಲೈಸೆನ್ಸ್ ಮಾಡಿಕೊಡಲು ಶೇಖ್ ಮೊಹಮ್ಮದ್ ರಫಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು ಐದು ಸಾವಿರ ರೂ. ಹಣವನ್ನು ಪಡೆದಿದ್ದರು. ಇವತ್ತು ಎರಡನೆ ಕಂತು 5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್’ಪಿ ವೇಣುಗೋಪಾಲ್, ಇನ್ಸ್’ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ, ಎನ್.ವೀರೇಂದ್ರ, ವಸಂತ, ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]