ಬಾರಂದೂರು ಬಳಿ ಭೀಕರ ಅಪಘಾತ, ಸೀಟ್’ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ➤ ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.

ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೊ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಹೇಗಾಯ್ತು ಆಪಘಾತ?

ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು ಅಫ್ಜಲ್ ಅವರು ಓಮ್ನಿ ಕಾರಿನಲ್ಲಿ ಭದ್ರಾವತಿಯಿಂದ ತರೀಕೆರೆ ಕಡೆಗೆ ತೆರಳುತ್ತಿದ್ದರು. ಬಾರಂದೂರು ಬಳಿ ಎದುರಿನಿಂದ ಬಂದ ಟಾಟಾ ಸುಮೋ ಕಾರು, ಓಮ್ನಿ ಕಾರಿಗೆ ಡಿಕ್ಕಿಯಾಗಿದೆ.

ಓಮ್ನಿ ಕಾರಿನ ಬಲ ಭಾಗಕ್ಕೆ ಗುದ್ದಿದ ಟಾಟಾ ಸುಮೋ ಕಾರು, ರಸ್ತೆಯಿಂದ ಪಕ್ಕಕ್ಕೆ ಹೋಗಿ ತಿರುಗಿ ನಿಂತಿದೆ. ಇತ್ತ ಓಮ್ನಿ ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕ ಮಂಜುನಾಥ್ ಗಂಭಿರ ಗಾಯಗೊಂಡು ಕಾರಿನಲ್ಲೇ ಸಿಲುಕಿ ಮೃತಪಟ್ಟಿದ್ದಾನೆ.

ಓಮ್ನಿ ಕಾರಿನಲ್ಲಿದ್ದ ಅಫ್ಜಲ್, ಟಾಟಾ ಸುಮೋ ಚಾಲಕ ಸುಬ್ರಹ್ಮಣ್ಯ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

AVvXsEjg6pSNP zPCKJ5AxskZbTphiAhyel8fkc4QBzDJ3X lXVeTsL46xZ6FlCL5ds0KHqOlW9yBTC84uYdxkpBTdLwxJa4VlU2AqXFSSBQgyLEl J0I1zv W3nFahKNjFVkZKVnr3mc2N1pP21fIRcS 9W6EJOOmt15rlSAzJoQ

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌